ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ
ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಮತ್ತು ಮಾಜಿ ಅಧ್ಯಕ್ಷರಾದ ಸಂಸದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವರಾದ ಭೈರತಿ ಸುರೇಶ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.