ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಹಗರಣ: ಆಂಧ್ರ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ

ಆಂಧ್ರ ಪ್ರದೇಶ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಈ ಹಗರಣದಲ್ಲಿ 371 ಕೋಟಿ ರೂಪಾಯಿ ಅಕ್ರಮ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು.
ಈ ಹಗರಣದ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಸಿಐಡಿಗೆ ವಹಿಸಿದ್ದರು. ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರು ಎ1 ಆರೋಪಿಯಾಗಿದ್ದು, ಇದೀಗ ಬಂಧಿಸಲಾಗಿದೆ.