ಕರ್ನಾಟಕದಲ್ಲಿ ಆ.17ರಂದು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್
ಕೊಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ನಾಳೆ(ಆಗಸ್ಟ್ 17) ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಪ್ರತಿಭಟನೆಗೆ ಕರೆ ಕೊಟ್ಟಿದೆ. ರಾಜ್ಯ ಐಎಂಎ ಸಂಘಟನೆ ಕೊಟ್ಟಿರುವ ಕರೆಗೆ ಸರ್ಕಾರಿ ವೈಧ್ಯಾದಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆ ಗಳ ಒಕ್ಕೂಟ ಮತ್ತು ಇನ್ನಿತರ ವೈದ್ಯಕೀಯ ಅಸೋಸಿಯೇಷನ್ಗಳು ಬೆಂಬಲ ಕೊಟ್ಟಿದ್ದು, ನಾಳೆ(ಶನಿವಾರ) ಕರ್ನಾಟಕದಲ್ಲಿ ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೂ ಆಸ್ಪತ್ರೆ ಓಪಿಡಿ ಬಂದ್ ಆಗಲಿದೆ. ಅಂದರೆ 24 ಗಂಟೆಗಳ ಕಾಲ ಓಪಿಡಿ ಸೇವೆ ಸ್ಥಗಿತವಾಗಲಿದೆ.
ಮುಷ್ಕರಕ್ಕೆ ಯಾರೆಲ್ಲ ಬೆಂಬಲ..!
- IMA ವ್ಯಾಪ್ತಿಯ ವೈದ್ಯರ ಬೆಂಬಲ
- ಫನಾ ಬೆಂಬಲ ಖಾಸಗಿ ಆಸ್ಪತ್ರೆಗಳ ಒಕ್ಕೂಟ
- ಸರ್ಕಾರಿ ವೈದ್ಯಾಧಿಕಾರಿಗಳ ಅಸೋಸಿಯೇಷನ್
- ಮಕ್ಕಳ ವೈದ್ಯರ ಅಸೋಸಿಯೇಷನ್
- ಅರ್ಥೋಪಿಟಿಕ್ ಅಸೋಸಿಯೇಷನ್
- ಮೆಡಿಕಲ್ ಕಾಲೇಜ್ ವೈದ್ಯರ ಅಸೋಸಿಯೇಷನ್
- ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ
ಕೊಲ್ಕತ್ತಾದ ಮೃತ ವೈದ್ಯೆಯ ಸಾವಿಗೆ ನ್ಯಾಯ ಒದಗಿಸಬೇಕು. ಹಿಂಸಾಚಾರದ ವಿರುದ್ಧ ವೈದ್ಯರಿಗೆ ರಕ್ಷಣೆ ಒದಗಿಸಬೇಕು. ಆಸ್ಪತ್ರೆಗಳನ್ನು ಸೇಫ್ ಝೋನ್ ಎಂದು ಘೋಷಿಸಲು IMA ಆಗ್ರಹಿಸಿದೆ. ಫೆಡರೇಷನ್ ಆಫ್ ರೆಸಿಡೆಂಟ್ ಡಾಕ್ಟರ್ ಅಸೋಸಿಯೇಷನ್ ಈಗಾಗಲೇ ತೀವ್ರ ಹೋರಾಟ ನಡೆಸುತ್ತಿದ್ದು, ನಾಳೆಯೂ ಬಂದ್ ಮುಂದುವರಿಸಲು ತೀರ್ಮಾನಿಸಲಾಗಿದೆ.