ಸಕಲೇಶಪುರ ಬಳಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತ
ಮಂಗಳೂರು:ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದಾಗಿ ಪರ್ವತಗಳ ಸಾಲಿನಲ್ಲಿ ಭೂ ಕುಸಿತ ಶುರುವಾಗಿದೆ. ಇದೀಗ ಮತ್ತೆ ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಉಂಟಾಗಿದೆ. ಹಾಗಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ.
ರೈಲ್ವೆ ಹಳಿ ಮೇಲೆ ಭೂಕುಸಿತದಿಂದಾಗಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲು ಬಾಳ್ಳುಪೇಟೆ ಬಳಿ ಬಾಕಿಯಾಗಿದೆ
ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ನೂರಾರು ಪ್ರಯಾಣಿಕರು ರೈಲು ಸಂಚಾರ ಸ್ಥಗಿತವಾಗಿದ್ದರಿಂದ ಪರದಾಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ