ಚೆನ್ನೈ ಸಮೀಪ ಗೂಡ್ಸ್ ರೈಲಿಗೆ ಮೈಸೂರು-ದರಭಂಗಾ ಎಕ್ಸ್ಪ್ರೆಸ್ ಡಿಕ್ಕಿ: ಹಳಿ ತಪ್ಪಿದ 13 ಬೋಗಿಗಳು

ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು 13 ಬೋಗಿಗಳು ಹಳಿ ತಪ್ಪಿ ಎರಡು ಬೋಗಿಗಳಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಚೆನ್ನೈ: ಮೈಸೂರಿನಿಂದ ದರ್ಭಾಂಗಕ್ಕೆ ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್ ರೈಲು ಕವರಪೆಟ್ಟೈ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಜೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವಘಡದಲ್ಲಿ ಪ್ರಯಾಣಿಕರಿದ್ದ 13 ಬೋಗಿಗಳು ಹಳಿ ತಪ್ಪಿವೆ. ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಮಿಳುನಾಡು ಪೊಲೀಸರು ಮಾಹಿತಿ ನೀಡಿದ್ದಾರೆ.