ನಿಗ್ರಹ ಪಡೆ ಎನ್ಕೌಂಟರ್ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ
ಉಡುಪಿ:ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್ಕೌಂಟರ್ ನಡೆದಿದೆ.
ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ.ಎಎನ್ಫ್-ನಕ್ಸಲರ ನಡುವೆ ಭೀಕರ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂಗೌಡನ ಹತ್ಯೆ!
ಎಎನ್ಎಫ್ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಸೀತಂಬೈಲು ಎಂಬಲ್ಲಿ ನಕ್ಸಲರ ವಿರುದ್ಡ ನಡೆದ ಭೀಕರ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂಗೌಡ ಹತ್ಯೆ ಮಾಡಲಾಗಿದೆ.
ಕೊಪ್ಪ ತಾಲೂಕಿನ ಯಡಗುಂದ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದ ಬಗ್ಗೆ ಮಾಹಿತಿ ಕಲೆಹಾಕಿದ್ದ ಎಎನ್ ಎಫ್ ತಂಡ. ಸೋಮವಾರ ರಾತ್ರಿವೇಳೆ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಿಸಲು ಬಂದಿದ್ದಾರೆ.
ಈ ವೇಳೆ ಎಎನ್ ಎಫ್ ತಂಡ ಕಾರ್ಯಾಚರಣೆ ನಡೆಸಿದೆ. ಅದಕ್ಕೆ ಪ್ರತಿಯಾಗಿ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಭೀಕರ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ.
ಇನ್ನುಳಿದ ನಾಲ್ಕೈದು ನಕ್ಸಲರು ಸ್ಥಳದಿಂದ ಪರಾರಿಯಾಗಿದ್ದು, ಶೋಧಕಾರ್ಯ ಮುಂದುವರಿದೆ