ಉದ್ಯಮಿ ಜೀವಾ ಆತ್ಮಹತ್ಯೆ ಕೇಸ್ – ಡೆತ್‌ನೋಟ್ FSLಗೆ ಕಳುಹಿಸಲು ಸಿಸಿಬಿ ತಯಾರಿ
ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ ತನಿಖೆ ಎದುರಿಸಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ಸಾಕ್ಷಿಗಳನ್ನು ಕಲೆಹಾಕಲು ಸಿಸಿಬಿ ವಿಶೇಷ ತನಿಖಾಧಿಕಾರಿಗಳ ತಂಡ ಮುಂದಾಗಿದೆ. ಜೀವಾ ತನಿಖೆ ಕರೆಯಲು ಕಾರಣ ಏನು? ಜೀವಾಗೆ ಸಂಬಂಧಿಸಿದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದ್ಯಾ? ಎಷ್ಟು ಬಾರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸಿದ್ದಾರೆ? ಎಂಬ ಆಯಾಮಗಳಲ್ಲಿ ತನಿಖೆ ನಡೆಸಲು, ಅಲ್ಲದೇ ಜೀವಾ ಅವರು ಬರೆದಿದ್ದ ಡೆತ್‌ನೋಟನ್ನ (Death Note) ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಇದರೊಂದಿಗೆ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.