ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಪದದಿಂದ ನಿಂದನೆ ಆರೋಪ: MLCಸಿಟಿ ರವಿಯನ್ನುಬಂಧನ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ ಆರೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಪೊಲೀಸರು ಸಿಟಿ ರವಿ ಅವರನ್ನು ಬಂಧನವಾಗಿದೆ. ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಇದರಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ. ಬಲವಂತಾಗಿಯೇ ಪೊಲೀಸರು ಸುವರ್ಣಸೌಧದಿಂದ ಸಿಟಿ ರವಿ ಅವರನ್ನು ಎತ್ತಿಕೊಂಡು ಬಂದು ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಇಬ್ಬರು ಎಸ್‌ಪಿ ರ್ಯಾಂಕ್ನ ಅಧಿಕಾರಿಗಳು, ನಾಲ್ಕು ಎಸ್ಕಾರ್ಟ್, ಎರಡು ಕೆಎಸ್‌ಆರ್‌ಪಿ ತುಕಡಿ ಭದ್ರತೆಯಲ್ಲಿ ಸಿಟಿ ರವಿ ಕರೆದುಕೊಂಡು ಹೋಗಲಾಗಿದೆ.
ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಕೇಸ್ ದಾಖಲಾಗಿದ್ದು. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ. ಇನ್ನು ಸೆಕ್ಷನ್ 75-ಲೈಂಗಿಕ ಬಣ್ಣದ ಟೀಕೆಗೆ 1 ವರ್ಷದವರೆಗೆ ಸೆರೆವಾಸ ಅಥವಾ ದಂಡ ಹಾಗೂ ಸೆಕ್ಷನ್79 ಪದಪ್ರಯೋಗ ಅಥವಾ ಸಂಜ್ಙೆಗಳ ಮೂಲಕ ಮಹಿಳೆಯ ಗೌರವಕ್ಕೆ ಧಕ್ಕೆಗೆ 3 ವರ್ಷದವರೆಗೆ ಸೆರೆವಾಸ ಮತ್ತು ದಂಡ ವಿಧಿಸಬಹುದು.
ರಾಜ್ಯಸಭೆಯಲ್ಲಿ ಅಮಿತ್ ಶಾ (Amit Shah) ಹೇಳಿಕೆ ಖಂಡಿಸಿ ಪರಿಷತ್‌ನಲ್ಲಿ (Vidhan Parishad) ಇಂದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಾತಿನ ಚಕಮಕಿ ನಡೆಯವಾಗ ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ಸದನದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿತ್ತು. ಬಳಿಕ ಸುವರ್ಣಸೌಧದಲ್ಲಿ ಕೋಲಾಹಲವೇ ಆಯ್ತು.
ಎಫ್‌ಐಆರ್ ದಾಖಲಾದ ಹಿರೇಬಾಗೇವಾಡಿ ಪೊಲೀಸ್ ಠಾಣೆ ಬಿಟ್ಟು ಬೇರೆ ಕಡೆಗೆ ಕರೆದೊಯ್ಯಲಾಗಿದೆ. ಹಿರೇಬಾಗೇವಾಡಿ ಠಾಣೆ ದೂರುದಾರೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ವ್ಯಾಪ್ತಿಯಲ್ಲಿರುವುದರಿಂದ ಅವರ ಬೆಂಬಲಿಗರು ಆಗಮಿಸುವ ಸಾಧ್ಯತೆಗಳಿವೆ. ಹೀಗಾಗಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಸಿಟಿ ರವಿ ಅವರನ್ನು ಬಂಧಿಸಿ ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ.