Wrestlers protest: ಕುಸ್ತಿಪಟುಗಳು ಬೆಂಬಲಿಸಿ ರಾಷ್ಟ್ರ ರಾಜಧಾನಿಗೆ ನುಗ್ಗಲು ರೈತರ ಸಿದ್ದತೆ: ದೆಹಲಿ ಗಡಿಯಲ್ಲಿ ಬಿಗಿ ಭದ್ರತೆ

0


bredcrumb

India

oi-Ravindra Gangal

By ಒನ್‌ಇಂಡಿಯಾ ಡೆಸ್ಕ್

| Updated: Thursday, June 1, 2023, 13:56 [IST]

Google Oneindia Kannada News

ನವದೆಹಲಿ, ಜೂನ್‌ 01 : ಭಾರತದ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯತ್ತ ರೈತರು ಮುನ್ನುಗ್ಗುತ್ತಿರುವುದು ಕಂಡುಬಂದಿದೆ. ಇದನ್ನು ಗಮನಿಸಿರುವ ದೆಹಲಿ ಪೊಲೀಸರು ಗುರುವಾರ ದೆಹಲಿಯ ಗಡಿ ಭಾಗಗಳಲ್ಲಿ ಭಾರೀ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.

ಭದ್ರತಾ ಸಿಬ್ಬಂದಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Wrestlers protest

‘ಭದ್ರತೆಯನ್ನು ಬಿಗಿಗೊಳಿಸಲಾಗಿದೆ, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಾವು ದೆಹಲಿಯ ಗಡಿಗಳಲ್ಲಿ ಹೆಚ್ಚುವರಿ ಗುಂಪುಗಳನ್ನು ಸಹ ಸ್ಥಾಪಿಸಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಾವು ಬಯಸುತ್ತೇವೆ. ಇದನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮಾಡಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಅಕ್ಕಪಕ್ಕದ ರಾಜ್ಯಗಳಿಂದ ದೆಹಲಿ ಪ್ರವೇಶಿಸುವ ವಾಹನಗಳನ್ನು ಗಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದರು.

Wrestlers protest

ಅಪ್ರಾಪ್ತ ಬಾಲಕಿ ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ರೈತ ಸಂಘಗಳ ಮಾತೃಸಂಸ್ಥೆಯಾದ ಎಸ್‌ಕೆಎಂ ಮಂಗಳವಾರ ಜೂನ್ 1 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.

ಭಾರತೀಯ ಕುಸ್ತಿಪಟುಗಳು ಮತ್ತು ಸಮಾಜದ ಇತರ ಎಲ್ಲಾ ವರ್ಗಗಳು ಪ್ರತಿಭಟನೆ ನಡೆಸುವ ಪ್ರಜಾಸತ್ತಾತ್ಮಕ ಹಕ್ಕನ್ನು ಭದ್ರಪಡಿಸುವುದು ಮತ್ತು ಬಿಜೆಪಿ ಸಂಸದರೂ ಆಗಿರುವ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸುವ ಉದ್ದೇಶದಿಂದ ಪ್ರದರ್ಶನಗಳಿಗೆ ತನ್ನ ಕರೆ ನೀಡಲಾಗಿದೆ ಎಂದು ಹೇಳಿಕೆಯಲ್ಲಿ ಎಸ್‌ಕೆಎಂ ಹೇಳಿದೆ.

ಟ್ರೇಡ್ ಯೂನಿಯನ್‌ಗಳು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು ಮತ್ತು ಬುದ್ಧಿಜೀವಿಗಳು ಸೇರಿದಂತೆ ಇತರ ಎಲ್ಲಾ ವಿಭಾಗಗಳನ್ನು ಪ್ರದರ್ಶನಗಳನ್ನು ನಡೆಸಲು ಸಮನ್ವಯಗೊಳಿಸುವುದಾಗಿ ಅದು ಹೇಳಿದೆ.

ಸಿಂಗ್ ಬಂಧನಕ್ಕೆ ಆಗ್ರಹಿಸಿ ಏಪ್ರಿಲ್ 23 ರಿಂದ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದರು. ಅದೇ ದಿನ ಉದ್ಘಾಟನೆಗೊಂಡ ಹೊಸ ಸಂಸತ್ ಭವನದ ಮುಂದೆ ಮೆರವಣಿಗೆ ಮಾಡಲು ಯತ್ನಿಸಿದ ನಂತರ ಭಾನುವಾರ ದೆಹಲಿ ಪೊಲೀಸರು ಅವರನ್ನು ಬಂಧಿಸಿ ನಂತರ ಕೈಬಿಟ್ಟರು.

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

English summary

Wrestlers protest: The Samyukta Kisan Morcha (SKM) has called for a nationwide protest in support of the wrestlers who are protesting against the head of the Wrestling Federation of India Brij Bhushan Sharan Singh.

Source

About The Author

Leave a Reply

Your email address will not be published. Required fields are marked *